ಟಾ_ರಸ ಧ್ಯಾನಸ್ಥನಾದಾಗ ದೇವರ ಜತೆ ಸಂಭಾಷಿಸುತ್ತಿರುತ್ತಾನೆ ಎಂಬುದು ಜನಪ್ರಿಯ ನಂಬಿಕೆ. ಕೆಲವರು ಹೇಳುವಂತೆ ಅವನು ಸ್ವರ್ಗ-ನರಕಗಳ ದರ್ಶನವನ್ನೂ ಮಾಡಿಕೊಂಡು ಹಿಂದಿರುಗುತ್ತಿದ್ದನಂತೆ. ಈ ಕಾರಣದಿಂದಾಗಿಯೇ ಧ್ಯಾನದಿಂದ ಎದ್ದ ತಕ್ಷಣ ಅವನಾಡುವ ಮಾತು ಈ ಲೋಕದ್ದಲ್ಲ ಎಂಬಂತೆ ಇರುತ್ತವೆ ಎಂದು ಕೆಲವರು ಹೇಳುತ್ತಾರೆ.
ಟಾ_ರಸ ಒಂದು ದಿನ ಎಂದಿನಂತೆ ಈಚಲ ಮರದ ಕೆಳಗೆ ಕುಳಿತಿದ್ದಾಗ ಒಬ್ಬಾತ ಬಂದು ಸ್ವರ್ಗ-ನರಕಗಳ ಕುರಿತು ಮಾತನಾಡಲು ತೊಡಗಿದ. ಟಾ_ರಸ `ಒಂದು ನಿಮಿಷ’ ಎಂದು ಹೇಳಿ ಸಮಾಧಿಗೆ ತೆರಳಿದ.
ಒಂದೆರಡು ನಿಮಿಷಗಳ ನಂತರ ಕಣ್ಣು ತೆರೆದಾಗ ಎದುರಿದ್ದಾತ `ನರಕದ ಹಿಂಸೆಯ ಬಗೆಗಿನ ತಮ್ಮ ಅಭಿಪ್ರಾಯವೇನು?’ ಎಂದು ಪ್ರಶ್ನಿಸಿದ.
ಟಾ_ರಸ ಉತ್ತರಿಸಿದ `ನಾನು ಈಗಷ್ಟೇ ನರಕದ ದರ್ಶನ ಮಾಡಿ ಬಂದೆ. ನರಕದ ಬಾಗಿಲು ತೆರೆದೇ ಇದೆ. ಆದರೆ ಯಾರೊಬ್ಬ ನರಕವಾಸಿಯೂ ಹೊರಗೆ ಬರುವ ಧೈರ್ಯ ಮಾಡುತ್ತಿಲ್ಲ!’









