ಶೂನ್ಯ ಸಂಪಾದಕ

ಬದುಕಿನ ಭವಿಷ್ಯ

In ಟಾ_ರಸನ ಕಥೆಗಳು on October 9, 2006 at 10:56 am

ಟಾ_ರಸ ತಾಳೆ ಮರದ ಕೆಳಗೆ ಹೆಂಡದ ಬುರುಡೆಯೊಂದಿಗೆ ಧ್ಯಾನಕ್ಕೆ ಕುಳಿತ ಹೊತ್ತಿನಲ್ಲಿ ಅವನು ಭವಿಷ್ಯ ನುಡಿಯುತ್ತಾನೆ ಎಂಬ ನಂಬಿಕೆ ಅನೇಕರಿಗೆ ಇತ್ತು. ಧ್ಯಾನಸ್ಥ ಸ್ಥಿತಿಯಲ್ಲಿ ಟಾ_ರಸ ಹೇಳುತ್ತಿದ್ದ ಕೆಲವು ಮಾತುಗಳನ್ನು ಹಲವರು ಭವಿಷ್ಯದ ಸೂಚನೆಗಳಾಗಿ ಪರಿಗಣಿಸುತ್ತಿದ್ದರು. ಇದನ್ನು ಅರಿತವರು ತಮ್ಮ ವೈಯಕ್ತಿಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಟಾ_ರಸನನ್ನು ಧ್ಯಾನದ ಹೊತ್ತಿನಲ್ಲಿ ಭೇಟಿಯಾಗುತ್ತಿದ್ದರು.

ಹೀಗೆ ಬಂದ ಒಬ್ಬಾತ ತಾನೆಷ್ಟು ಶ್ರೀಮಂತ, ತಾನೆಷ್ಟು ತೀರ್ಥಕ್ಷೇತ್ರಗಳಿಗೆ ಶಾಂತಿ ಹುಡುಕಿಕೊಂಡು ಅಲೆದಿದ್ದೇನೆ ಎಂದೆಲ್ಲಾ ಹೇಳಿಕೊಂಡು `ಆದರೂ ನನಗೆ ಶಾಂತಿ ದೊರೆತಿಲ್ಲ. ಆದುದರಿಂದ ನಾನು ಹೇಗೆ ಬದುಕಬೇಕು. ನನ್ನ ಮುಂದಿನ ಬದುಕು ಹೇಗಿರುತ್ತದೆ?’ ಎಂದು ಪ್ರಶ್ನಿಸಿದ.

ಟಾ_ರಸ ಉತ್ತರವೂ ಮಿಂಚಿನ ವೇಗದಲ್ಲಿ ಬಂತು: `ನಿನ್ನ ಬದುಕು ಬಹಳ ಕಷ್ಟವಿದೆ. ಹಿಂದೆ ಯಾರೂ ನಿನ್ನ ಬದುಕನ್ನು ಬಾಳಿ ನೋಡಿರಲಿಲ್ಲ!’

  1. ಧನ್ಯವಾದಗಳು

    ಟಾ_ರಸರನ್ನು ಪರಿಚಯಿಸಿದ್ದಕ್ಕೆ .
    ಸಂಪದದಲ್ಲಿ ಒಳ್ಳೆಯ ಝೆನ್ ಕಥೆಗಳನ್ನು ಪೋಸ್ಟ್ ಮಾದಿದ್ದೇನೆ (ಝೆನ್ ಕಥೆಗಳ ವಿಭಾಗದಲ್ಲಿ ನೋಡಿ).

    ಶ್ರೀಕಾಂತ ಮಿಶ್ರಿಕೋಟಿ

All comments are screened for appropriateness. Commenting is a privilege, not a right. Good comments will be cherished, bad comments will be deleted.