Post

ಗುರುವಿನ ಲಕ್ಷಣ

In ಟಾ_ರಸನ ಕಥೆಗಳು on January 23, 2007 by ಶೂನ್ಯ ಸಂಪಾದಕ

ಟಾ_ರಸ ಆಗಷ್ಟೇ ಬಂದು ಆಲ್‌_ಹಾಲ್‌ರ ಆಶ್ರಮಕ್ಕೆ ಸೇರಿದ್ದ. ಬಂದ ಕೆಲವೇ ದಿನಗಳಲ್ಲಿ ಆಶ್ರಮದ ಹಲವರಲ್ಲಿ ಪ್ರಶ್ನೆಗಳನ್ನು ಹುಟ್ಟಿಸಿದ್ದ ಟಾ_ರಸನನ್ನು ಕರೆದ ಗುರು ಆಲ್‌_ಹಾಲ್‌ ಅವನ ಕಿವಿಯಲ್ಲಿ `ವಿಮೋಚನಾ ಮಂತ್ರ’ ಬೋಧಿಸಿ `ಇದನ್ನು ನೀನು ಯಾರಿಗೂ ಹೇಳಬಾರದು. ಹೇಳಿದರೆ ನೀನು ಬಂಧನದಲ್ಲಿ ಸಿಲುಕಿ ನಿನ್ನಿಂದ ಕೇಳಿಸಿಕೊಂಡವರು ವಿಮೋಚಿತರಾಗುತ್ತಾರೆ’ ಎಂದು ಎಚ್ಚರಿಸಿ ಕಳುಹಿಸಿದರು.

ಅಲ್ಲಿಂದ ಹೊರಟ ಟಾ_ರಸ ಆಶ್ರಮದಲ್ಲಿದ್ದ ಎಲ್ಲ ವಿದ್ಯಾರ್ಥಿಗಳನ್ನೂ ಕರೆದು ಗುಂಪುಗೂಡಿಸಿ `ವಿಮೋಚನ ಮಂತ್ರ’ವನ್ನು ಉಚ್ಚ ಸ್ವರದಲ್ಸಿ ಹೇಳಿದ. ಈಗಾಗಲೇ ಆಲ್‌_ಹಾಲ್‌ರಿಂದ ವಿಮೋಚನ ಮಂತ್ರವನ್ನು ಅರಿತಿದ್ದ ಹಿರಿಯ ವಿದ್ಯಾರ್ಥಿಗಳು  ಹೋಗಿ ಆಲ್‌_ಹಾಲ್‌ಗೆ ದೂರು ಕೊಟ್ಟರು. ಅದಕ್ಕೆ ಅವರು  `ಅವನು ಗುರುವಾಗುವುದು ಖಚಿತ’ ಎಂದು ನಕ್ಕರು.

2 Responses to “ಗುರುವಿನ ಲಕ್ಷಣ”

  1. sooooooooooooperb.

    So clever and simple way to teach.

    Thanks a ton for sharing this

  2. ಧನ್ಯವಾದಗಳು ಪ್ರಿಯ ಎಂಡಿಯವರೇ. ನನ್ನ ಕಥೆಗಳನ್ನು ಮಾಮೂಲಿಯಾದ ಮೂರ್ನಾಲ್ಕು ಜನರಲ್ಲದೆ ಉಳಿದವರೂ ಓದುತ್ತಾರೆ ಎಂದು ತಿಳಿದು ಸಂತೋಷವಾಗಿದೆ.ನಿಮಗಾಗಿ ಇನ್ನಷ್ಟು ಆಲ್_ಹಾಲ್ ಮತ್ತು ಟಾ_ರಸನ ಕಥೆಗಳು ಸದ್ಯವೇ ಇಲ್ಲಿ ಕಾಣಿಸಿಕೊಳ್ಳಲಿವೆ.

Leave a Reply